ನ.18 ರಂದು ಪಿಎಸ್ಸೈ ಪರೀಕ್ಷೆ

Update: 2018-11-14 17:00 GMT

ಬೆಂಗಳೂರು, ನ.14: ನಗರ ಪೊಲೀಸ್ ಘಟಕದಲ್ಲಿ ಖಾಲಿ ಉಳಿದಿರುವ ರಿಸರ್ವ್ ಸಬ್-ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿ ಸಂಬಂಧ ನ.18 ಪರೀಕ್ಷೆ ನಡೆಯಲಿದೆ.

ಬೆಂಗಳೂರು ನಗರದ 3 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 2,080 ಅಭ್ಯರ್ಥಿಗಳಿಗೆ ಪತ್ರಿಕೆ-1ಅನ್ನು ಬೆಳಗ್ಗೆ 10:30 ರಿಂದ ಮಧ್ಯಾಹ್ನ 12 ಗಂಟೆ ಮತ್ತು ಪತ್ರಿಕೆ-2 ಅನ್ನು ಮಧ್ಯಾಹ್ನ 2 ಗಂಟೆಯಿಂದ 3:30 ಗಂಟೆಯವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿ ಇಲಾಖಾ ವೆಬ್‌ಸೈಟ್ www. ksp.gov.in ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕರೆ ಪತ್ರವನ್ನು ಪಡೆದುಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News