ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮುಸ್ಲಿಂ ವಿದ್ಯಾರ್ಥಿಗಳಿಗೆ ಸನ್ಮಾನ

Update: 2018-11-14 17:41 GMT

ಮಂಗಳೂರು, ನ.14: ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿ ಕಲೆ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಅಧಿಕ ಅಂಕ ಗಳಿಸಿದ ಮುಸ್ಲಿಂ ವಿದ್ಯಾರ್ಥಿಗಳನ್ನು ಸನ್ಮಾನಿಸಲು ದ.ಕ. ಮತ್ತು ಉಡುಪಿ ಜಿಲ್ಲಾ ಜಮೀಯ್ಯತುಲ್ ಫಲಾಹ್ ನಿರ್ಧರಿಸಿದೆ.

ಉಭಯ ಜಿಲ್ಲೆಯ ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಸಂಖ್ಯೆಯೊಂದಿಗೆ ಅಂಕಪಟ್ಟಿಯನ್ನು 9448302716 ನಂಬರ್‌ಗೆ ವಾಟ್ಸ್‌ಆ್ಯಪ್ ಮಾಡಬಹುದಾಗಿದೆ.

ನ.18ರಂದು ಕಂಕನಾಡಿಯಲ್ಲಿರುವ ಫಲಾಹ್ ಸಮುದಾಯ ಭವನದಲ್ಲಿ ನಡೆಯುವ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News