ಡಿ.11ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

Update: 2018-11-14 17:57 GMT

ಹೊಸದಿಲ್ಲಿ, ನ.14: ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 11ರಿಂದ ಜನವರಿ 8ರವರೆಗೆ ನಡೆಸುವಂತೆ ಸಚಿವ ಸಂಪುಟದ ಸಂಸದೀಯ ವ್ಯವಹಾರಗಳ ಸಮಿತಿ(ಸಿಸಿಪಿಎ) ಶಿಫಾರಸು ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಸಿಸಿಪಿಎಯ ಅಧ್ಯಕ್ಷ , ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಚಳಿಗಾಲದ ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆ ನಡೆದು ಡಿ.11ರಿಂದ ಜನವರಿ 8ರವರೆಗೆ ಅಧಿವೇಶನ ನಡೆಸುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ನವೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತದೆ. ಆದರೆ ಕಳೆದ ವರ್ಷದಂತೆಯೇ ಈ ಬಾರಿಯೂ ಡಿಸೆಂಬರ್‌ನಲ್ಲೇ ಅಧಿವೇಶನ ನಡೆಯಲಿದೆ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಾರಿಯ ಅಧಿವೇಶನ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News