ಚೆನ್ನೈಯತ್ತ ದಿಕ್ಕು ಬದಲಿಸಿದ ‘ಗಜ’: ನ.15ರಂದು 6 ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Update: 2018-11-14 17:57 GMT

ಚೆನ್ನೈ, ನ.14: ‘ಗಜ’ ಚಂಡಮಾರುತ ಪಶ್ಚಿಮ-ನೈಋತ್ಯ ದಿಕ್ಕಿನೆಡೆಗೆ ತಿರುಗಿದ್ದು ಗುರುವಾರ(ನವೆಂಬರ್ 15) ಚೆನ್ನೈಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

 ಚೆನ್ನೈ ಸೇರಿದಂತೆ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ತೂತ್ತುಕುಡಿ, ಕುಡಲೂರು, ನಾಗಪಟ್ಟಿಣಂ, ರಾಮನಾಥಪುರಂ, ತಿರುವಾರೂರು, ಪುದುಕೊಟ್ಟೈ ಮತ್ತು ತಂಜಾವೂರು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ . ಜೊತೆಗೆ ಗಂಟೆಗೆ 70ರಿಂದ 80 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಂದು ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಕುಡಲೂರು, ನಾಗಪಟ್ಟಿಣಂ, ರಾಮನಾಥಪುರಂ, ತಿರುವಾರೂರು, ಪುದುಕೊಟ್ಟೈ ಮತ್ತು ತಂಜಾವೂರು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಚಂಡಮಾರುತ ಪಂಬನ್ ಮತ್ತು ಕಡಲೂರು ನಡುವೆ ತಮಿಳುನಾಡಿನ ಕರಾವಳಿಯನ್ನು ದಾಟಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News