ಬೈಂದೂರು: ವಾಹನ ಅಪಘಾತಕ್ಕೆ ಪೊಲೀಸ್ ಸಿಬ್ಬಂದಿ ಬಲಿ

Update: 2018-11-15 06:06 GMT

ಉಡುಪಿ, ನ.15: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಿಬ್ಬಂದಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಂಬದಕೋಣಿ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಬೈಂದೂರು ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ನಾಗೇಶ್ ಬಿಲ್ಲವ ಮೃತಪಟ್ಟವರಾಗಿದ್ದಾರೆ.

ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಅವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ನಾಗೇಶ್ ಮೃತಪಟ್ಟಿದ್ದಾರೆ.
ಮೃತರು ಐದು ತಿಂಗಳ ಹಿಂದೆಯಷ್ಟೇ ವಿವಾಹಿತರಾಗಿದ್ದರು.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸಹಿತ ಹಿರಿಯ ಪೊಲೀಸ್‌ಅಧಿಕಾರಿಗಳು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News