ಡೈಮಂಡ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಮಕ್ಕಳ ದಿನಾಚರಣೆ

Update: 2018-11-15 06:17 GMT

ಮಂಗಳೂರು, ನ.15: ಡೈಮಂಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಬುಧವಾರ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. 

ಡೈಮಂಡ್ ಎಜುಕೇಶನಲ್ ಟ್ರಸ್ಟ್ ಸಲಹಾ ಸಮಿತಿ ಸದಸ್ಯ ಬಾವಾಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಟ್ಯಾಲೆಂಟ್‌ ರಿಸರ್ಚ್ ಫೌಂಡೇಶನ್ ಸಲಹೆಗಾರ ರಫೀಕ್ ಮಾಸ್ಟರ್ ವಿದ್ಯಾರ್ಥಿಗಳ ಹೆತ್ತವರೊಂದಿಗೆ ಸಮಾಲೋಚನೆ ನಡಸುತ್ತಾ ಮಕ್ಕಳಿಗೆ ಯಾವ ರೀತಿಯಲ್ಲಿ ಕನಸುಗಳನ್ನ ಬಿತ್ತಬೇಕು ಮತ್ತು ಅದು ವಿದ್ಯಾರ್ಥಿ ಜೀವನದಲ್ಲಿ ಎಷ್ಟೊಂದು ಪರಿಣಾಮ ಬೀರುತ್ತದೆ ಎಂಬುದನ್ನು ವಿವರಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಸಹಿತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ದಾರುಸ್ಸಲಾಂ ಸಂಸ್ಥೆಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಹಮದ್ ಬಶೀರ್ ತೀರ್ಪುಗಾರರಾಗಿ ಆಗಮಿಸಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯನಿರ್ವಾಹಕ ರಿಝ್ವಾನ್ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News