ಕೇಂದ್ರ ಸರಕಾರದ ನೀತಿಗೆ ಜನರು ಬೇಸತ್ತಿದ್ದಾರೆ: ಯು.ಟಿ.ಖಾದರ್

Update: 2018-11-15 13:19 GMT

ಕೊಣಾಜೆ,ನ.15: ಕೇಂದ್ರ ಸರ್ಕಾರದ ನೀತಿಯ ಪರಿಣಾಮ ಜನರು ಬೇಸತ್ತಿದ್ದಾರೆ, ಬಿಜೆಪಿ ವಿರುದ್ಧ ಜನರಲ್ಲಿ ಅತಿಯಾದ ಬೇಸರ ಇದ್ದು ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬಂದ ಫಲಿತಾಂಶವೇ ಸಾಕ್ಷಿ, ಇದನ್ನು ಸಮರ್ಪಕವಾಗಿ ಬಳಸಿಕೊಂಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತೆ ಗೆಲ್ಲುವಂತೆ ಶ್ರಮಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. 

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಸೈಗೋಳಿ ಲಯನ್ಸ್ ಸಭಾಂಗಣದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. 

ಯಾವುದೇ ಪ್ರತಿಫಲ ಬಯಸದೆ ವರ್ಷವಿಡೀ ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ಕೆಲವು ಕಡೆ ಮತ ಸಿಗದ ಬೇಸರವಿದೆ, ಆದರೂ ಅದೆಲ್ಲವನ್ನೂ ಮರೆತು ಮತ್ತೆ ಅಭಿವೃದ್ಧಿಪರ ಚಿಂತನೆಗಳೊಂದಿಗೆ ರಾಜಕೀಯರಹಿತವಾಗಿ ಕಾರ್ಯನಿರ್ವಹಿಸಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ರಶೀದಾ ಬಾನು, ತಾಲೂಕು ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ಮೋನು, ಸದಸ್ಯರಾದ ಅಬ್ದುಲ್ ಜಬ್ಬಾರ್ ಬೋಳಿಯಾರ್, ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ, ಪದ್ಮಾವತಿ ಪೂಜಾರಿ, ವಕ್ಫ್ ಜಿಲ್ಲಾಧ್ಯಕ್ಷ ಯು.ಕೆ.ಮೋನು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಭಟ್ನಗರ, ನಝರ್ ಷಾ ಪಟ್ಟೋರಿ , ಸಲೀಂ ಮೇಘಾ ಅಸೈಗೋಳಿ, ರಾಜಶೇಖರ್ ಕೋಟ್ಯಾನ್, ಸದಾಶಿವ ಉಳ್ಳಾಲ್, ದಿನೇಶ್ ರೈ, ಎನ್.ಎಸ್.ಕರೀಂ, ಪದ್ಮನಾಭ ನರಿಂಗಾನ, ದೇವಕಿ ಉಳ್ಳಾಲ್, ದಿನೇಶ್ ಕುಂಪಲ ಇನ್ನಿತರರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಮುಸ್ತಫಾ ಮಲಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News