ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಲಂಚ ಸ್ವೀಕರಿಸಿರುವ ಬಗ್ಗೆ ಪುರಾವೆ ಸಿಕ್ಕಿಲ್ಲ: ವರದಿ

Update: 2018-11-15 16:33 GMT

ಹೊಸದಿಲ್ಲಿ,ನ.15: ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಲಂಚ ಸ್ವೀಕರಿಸಿರುವ ಬಗ್ಗೆ ತನಿಖೆಯಲ್ಲಿ ಯಾವುದೇ ಸಾಕ್ಷಿ ಲಭ್ಯವಾಗಿಲ್ಲ ಎಂದು ಕೇಂದ್ರ ವಿಚಕ್ಷಣ ಆಯೋಗ ತಿಳಿಸಿರುವುದಾಗಿ ವರದಿಯಾಗಿದೆ. ಸಿಬಿಐ ಸಹಾಯಕ ಮುಖ್ಯಸ್ಥ ರಾಕೇಶ್ ಅಸ್ತಾನಾ ಅಲೋಕ್ ವರ್ಮಾ ವಿರುದ್ಧ ಲಂಚದ ಆರೋಪ ಮಾಡಿದ್ದರು.

ಹಣ ವರ್ಗಾವಣೆ ಬಗ್ಗೆ ವಿಚಕ್ಷಣ ಪಡೆಗೆ ಯಾವುದೇ ಸಾಕ್ಷಿಗಳು ಲಭ್ಯವಾಗಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಅಲೋಕ್ ವರ್ಮಾಗೆ ಕ್ಲೀನ್‌ ಚಿಟ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. ತನಿಖೆಯ ವೇಳೆ ವಿಚಕ್ಷಣ ದಳಕ್ಕೆ ಆಡಳಿತಾತ್ಮಕ ದೋಷಗಳು ಕಂಡುಬಂದಿದೆ. ಆದರೆ ಭ್ರಷ್ಟಾಚಾರ ನಡೆದಿರುವ ಕುರಿತು ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಲೋಕ್ ವರ್ಮಾ ಲಂಚ ಸ್ವೀಕರಿಸಿದ್ದಾರೆ ಎಂದು ರಾಕೇಶ್ ಅಸ್ತಾನ ಸರಕಾರ ಮತ್ತು ವಿಚಕ್ಷಣ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ವಿಚಕ್ಷಣ ಆಯೋಗವು ಇಬ್ಬರು ಅಧಿಕಾರಿಗಳ ವಾದವನ್ನೂ ಆಲಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News