ಮಕ್ಕಳಲ್ಲಿನ ಪ್ರತಿಭೆ-ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿ: ಶಾಲಿನಿ ರಜನೀಶ್

Update: 2018-11-15 16:23 GMT

ಬೆಂಗಳೂರು, ನ. 15: ಮಕ್ಕಳಲ್ಲಿ ಪ್ರತಿಭೆ ಮತ್ತು ಸ್ಪರ್ಧಾಮನೋಭಾವ ಗುರುತಿಸಿ ಅವರ ಸಾಮರ್ಥ್ಯ ಪ್ರದರ್ಶಿಸಲು ಮತ್ತು ವಿಶ್ವಾಸ ವೃದ್ಧಿಸಿಕೊಳ್ಳಲು ಹೆಚ್ಚೆಚ್ಚು ಅವಕಾಶ ಕಲ್ಪಿಸಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.

ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಮಕ್ಕಳ ಕಾರ್ಯಕ್ರಮ ‘ಕಲರ್ಸ್ ಆಫ್ ಲೈಪ್ ಸಿಂಚನ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಸುಪ್ತ ಪ್ರತಿಭೆ ಹೊರಬರಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಶ್ಲಾಘಿಷಿಸಿದರು.

ಕಲರ್ಸ್ ಆಫ್ ಲೈಫ್‌ನ ಸಿಮ್ರನ್ ಚಂದೋಕ್ ಮಾತನಾಡಿ, ಸರಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಕಲಿಕೆಗೆ ಎಲ್ಲರೂ ನೆರವಾಗಬೇಕು. ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಿರುವ ಈ ಕಾರ್ಯಕ್ರಮ ಸ್ಫೂರ್ತಿದಾಯ ಎಂದು ಶ್ಲಾಘಿಸಿದರು. ಸರಕಾರಿ ಶಾಲೆಗಳ 1500ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಶೈನಾ ಗಣಪತಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News