ಲಾರಿ ಮಾಲಕರಿಗೆ ಕಿರುಕುಳ ತಡೆಯಲು ಒಕ್ಕೂಟ ರಚನೆ

Update: 2018-11-15 18:16 GMT

ಮಂಗಳೂರು, ನ.15: ದ.ಕ. ಲಾರಿ ಮಾಲಕರ ಸಂಘಗಳ ಒಕ್ಕೂಟವನ್ನು ನ.19ರಂದು ಬೆಳಗ್ಗೆ 10:30ಕ್ಕೆ ನಗರದ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ ಎಂದು ಸಂಘದ ಸಲಹೆಗಾರ ಬಿ.ಎಸ್. ಚಂದ್ರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸಮಾರಂಭದಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಕೃಷ್ಣ ಜೆ. ಪಾಲೆಮಾರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳು ಸಾಗಾಟದ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಲಾರಿ ಮಾಲಕರ ಮೇಲೆ ದಂಡ ವಿಧಿಸಿ, ಕಿರುಕುಳ, ದೌರ್ಜನ್ಯ ಅಧಿಕಾರಿಗಳಿಂದ ನಡೆಯುತ್ತಿದೆ. ಜಿಲ್ಲೆಯ ಜನಸಾಮಾನ್ಯರಿಗೆ ಕಾಮಗಾರಿ ನಡೆಸಲು ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆ ಸಮಸ್ಯೆ ಪರಿಹರಿಸಲು ಒಕ್ಕೂಟ ಸಂಘಟಿತವಾಗಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿರುವುದಾಗಿ ಚಂದ್ರು ತಿಳಿಸಿದ್ದಾರೆ.

ಲಾರಿ ಮಾಲಕರ ಸಮಸ್ಯೆಗೆ ಸರಕಾರ ತಕ್ಷಣ ಸ್ಪಂದಿಸದೆ ಇದ್ದರೆ ಸಂಘಟನೆಯ ಮೂಲಕ ತೀವ್ರವಾದ ಹೋರಾಟ ನಡೆಸಲು ತೀರ್ಮಾನಿಸಿರುವುದಾಗಿ ಒಕ್ಕೂಟದ ಅಧ್ಯಕ್ಷ ಜೈರಾಜ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ರಾಜರತ್ನ ಪ್ರಧಾನ ಕಾರ್ಯದರ್ಶಿ ಸನಿಲ್ ಮನೋಜ್ ಫೆರ್ನಾಂಡೀಸ್, ಖಜಾಂಚಿ ಎಂ.ಎಸ್. ಮೋನು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News