ಮಡಿಕೇರಿ: ಅಕ್ರಮ ಬೀಟೆ ಸಾಗಾಟ; 3 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ

Update: 2018-11-15 18:19 GMT

ಮಡಿಕೇರಿ, ನ.15: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಅಂದಾಜು 3 ಲಕ್ಷ ರೂ. ಮೌಲ್ಯದ ಬೀಟೆ ಮರದ ನಾಟಗಳನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಕುಶಾಲನಗರ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

ವಾಹನವೊಂದರಲ್ಲಿ ಅಕ್ರಮವಾಗಿ ಬೀಟೆ ಮರದ ನಾಟಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಖಚಿತ ಮಾಹಿತಿಯನ್ನು ಆಧರಿಸಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಬೀಟೆ ನಾಟಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಸಂದರ್ಭ ಲಾರಿ ಚಾಲಕ ಪರಾರಿಯಾದನೆಂದು ತಿಳಿದು ಬಂದಿದೆ.

ಮಡಿಕೇರಿ ಅರಣ್ಯ ಸಂಚಾರಿ ದಳದ ಅರಣ್ಯಾಧಿಕಾರಿ ಹೆಚ್.ಜೆ.ದೇವರಾಜ್, ಉಪ ವಲಯ ಅರಣ್ಯಾಧಿಕಾರಿಗಳಾದ ಕೆ.ಸಿ.ನಾರಾಯಣ ಮೂಲ್ಯ, ಕೆ.ಎನ್.ದೇವಯ್ಯ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ರಕ್ಷಕ ಕೆ.ಟಿ.ಗಣೇಶ್ ಕುಮಾರ್, ಚಾಲಕರುಗಳಾದ ಎಂ.ಎಂ.ಪೂವಯ್ಯ, ಕೆ.ಎನ್.ಪ್ರವೀಣ್ ರಾವ್ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News