ಶಿವಮೊಗ್ಗ: ಲೈಗಿಂಕ ಕಿರುಕುಳ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

Update: 2018-11-16 12:01 GMT

ಶಿವಮೊಗ್ಗ, ನ.16: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಗಿಂಕ ಕಿರುಕುಳ ನೀಡಿದ ಆರೋಪಿಗೆ ಕಲಂ 8 ಪೋಕ್ಸೋ ಕಾಯ್ದೆಯಡಿ ತಪ್ಪಿತಸ್ಥನೆಂದು ತೀರ್ಮಾನಿಸಿ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 25,000 ರೂ.ಗಳ ದಂಡವಿಧಿಸಿ ಶಿವಮೊಗ್ಗದ 1ನೇ ಹೆಚ್ಚುವರಿ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಿವಪ್ರಸಾದ್ ಕೆ.ಬಿ. ರವರು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.

 ಹೊನ್ನಾಳಿ ತಾಲೂಕು ಹಳೇಪೇಟೆ ಶಿವಕುಮಾರ್ ಶಿಕ್ಷೆಗೊಳಗಾದ ಆರೋಪಿ. 2014ರ ಡಿಸೆಂಬರ್ ನಲ್ಲಿ ಶಿವಮೊಗ್ಗ ಸೇಕ್ರೇಡ್ ಹಾರ್ಟ್ ಚರ್ಚ್ ಒಳಗೆ ಕ್ಯಾಂಡಲ್ ಹಚ್ಚಲು ಹೋಗಿದ್ದ ಇಬ್ಬರು ಗೆಳತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ತನಿಖೆಯಲ್ಲಿ ದೃಢಪಟ್ಟಿದ್ದರಿಂದ ಆರೋಪಿ ಶಿವಕುಮಾರ್ ಮೇಲೆ ಕಲಂ 354 (ಎ) ಐಪಿಸಿ ಹಾಗೂ ಕಲಂ 8 ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಪೋಕ್ಸೋ ವಿಶೇಷ ಸರ್ಕಾರಿ ಅಭಿಯೋಜಕ ಎಸ್.ಕೆ.ಮೂರ್ತಿರಾವ್ ಅವರು ವಿಚಾರಣೆ ಮಾಡಿ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News