ಮಂಗಳೂರಿಗೆ ಆಗಮಿಸಿದ ಸಿಎಂ ಕುಮಾರಸ್ವಾಮಿ, ದೇವೇಗೌಡ

Update: 2018-11-16 12:53 GMT

ಮಂಗಳೂರು, ನ.16: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೆಗೌಡ ಅವರು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆ 5:30ಕ್ಕೆ ಬಂದಿಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಹಿತ ಅವರ ತಾಯಿ ಚೆನ್ನಮ್ಮ, ಪತ್ನಿ ಅನಿತಾ ಕುಮಾರಸ್ವಾಮಿ, ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ. ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಆಗಮಿಸಿದರು.

5:45ಕ್ಕೆ ಉಳ್ಳಾಲ ಬೀಚ್‌ನಲ್ಲಿ ಎಂಎಲ್‌ಸಿ ಬಿ.ಎಂ. ಫಾರೂಕ್ ಅವರ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ರಾತ್ರಿ 9 ಗಂಟೆಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ. ಇನ್ನುಳಿದ ಅತಿಥಿಗಳು ಮಂಗಳೂರಿನಲ್ಲಿಯೇ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದುಬಂದಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News