ಸಚಿವ ಡಿಕೆ ಶಿವಕುಮಾರ್‌ಗೆ ಮತ್ತೆ ನೋಟಿಸ್

Update: 2018-11-16 14:46 GMT

ಬೆಂಗಳೂರು, ನ.16: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯ(ಇಡಿ) ನೋಟಿಸ್ ಜಾರಿ ಮಾಡಿ ತ್ವರಿತವಾಗಿ ಸ್ಪಷ್ಟೀಕರಣ ನೀಡುವಂತೆ ಸೂಚಿಸಿದೆ.

ಹೊಸದಿಲ್ಲಿಯಲ್ಲಿರುವ ಶಿವಕುಮಾರ್ ಅವರ ಒಡತನದ ಫ್ಲ್ಯಾಟ್‌ನಲ್ಲಿ ನಗದು ಪತ್ತೆಯಾದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ಡಿ.ಕೆ ಶಿವಕುಮಾರ್ ಸ್ಪಷ್ಟೀಕರಣ ನೀಡಿದ್ದರೂ, ಸಹ ಇ.ಡಿ ಇನ್ನೊಮ್ಮೆ ಸ್ಪಷ್ಟೀಕರಣ ಕೇಳಿದೆ.

ಯಾವುದು ಈ ಪ್ರಕರಣ?: ಕೆಲ ತಿಂಗಳ ಹಿಂದೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ್ ಅವರ ನಿವಾಸದ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಅವರ ನಿವಾಸದಲ್ಲಿ ಕೋಟ್ಯಂತರ ನಗದು ಪತ್ತೆಯಾಗಿತ್ತು ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಆದಾಯ ತೆರಿಗೆ ಅಧಿಕಾರಿಗಳು ನಂತರ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿದ್ದರು. ಸಚಿವ ಡಿ.ಕೆ.ಶಿವಕುಮಾರ್ ಅವರ ಹೊಸದಿಲ್ಲಿ ನಿವಾಸದಲ್ಲಿ ಪತ್ತೆಯಾದ ಹಣದ ಮೂಲದ ಬಗ್ಗೆ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ ಈ ಸಂಬಂಧ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News