ರಾಜೀವ್ ಗಾಂಧಿ ಆರೋಗ್ಯ ವಿವಿ ಸಿಂಡಿಕೇಟ್ ಸದಸ್ಯರಾಗಿ ಡಾ.ಯು.ಟಿ. ಇಫ್ತಿಕಾರ್ ಅಲಿ ಪುನರಾಯ್ಕೆ

Update: 2018-11-16 16:05 GMT

ಬೆಂಗಳೂರು, ನ. 16: ಮಂಗಳೂರಿನ ಡಾ.ಎಂ.ವಿ. ಶೆಟ್ಟಿ ಫಿಸಿಯೋತೆರಪಿ ಕಾಲೇಜಿನ ಪ್ರಾಧ್ಯಾಪಕ ಡಾ.ಯು.ಟಿ. ಇಫ್ತಿಕಾರ್ ಅಲಿ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.

ರಾಜ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರ ಸೋದರರಾಗಿರುವ ಪ್ರೊ.ಯು.ಟಿ. ಇಫ್ತಿಕಾರ್ ಆರೋಗ್ಯ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದವರು.

ಮಂಗಳೂರಿನ ಎಂ.ವಿ ಶೆಟ್ಟಿ ಫಿಸಿಯೋತೆರಪಿ ಕಾಲೇಜಿನ ಪ್ರಾಧ್ಯಾಪಕರಾಗಿರುವ ಪ್ರೊ.ಇಫ್ತಿಕಾರ್ ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿವಿಯ ಸೆನೆಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಫಿಸಿಯೋತೆರಪಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿ, ಸ್ಪೋರ್ಟ್ಸ್ ಆ್ಯಂಡ್ ಫಿಟ್ನೆಸ್ ಟ್ರೈನಿಂಗ್ ಫೆಡೆರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ, ರಾಷ್ಟ್ರೀಯ ಫಿಸಿಯೋತೆರಪಿಸ್ಟ್ ಗಳ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಫಿಸಿಯೋತೆರಪಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಯು.ಟಿ. ಫರೀದ್ ಪ್ರತಿಷ್ಠಾನದ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಮಂಗಳೂರು, ಬೆಂಗಳೂರು, ದೆಹಲಿ ಮಾತ್ರವಲ್ಲದೆ ವಿಶ್ವದ ವಿವಿಧೆಡೆಗಳ ಪ್ರತಿಷ್ಠಿತ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಆರೋಗ್ಯ ಕ್ಷೇತ್ರದ ತಜ್ಞರ ನಿಕಟ ಸಂಪರ್ಕದಲ್ಲಿರುವ ಪ್ರೊ.ಇಫ್ತಿಕಾರ್ ಇವುಗಳ ಮೂಲಕ ಸಮಾಜ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News