ಕಾರು ಢಿಕ್ಕಿ: ಪಾದಾಚಾರಿ ಮೃತ್ಯು

Update: 2018-11-16 15:24 GMT

ಗಂಗೊಳ್ಳಿ, ನ.16: ತ್ರಾಸಿ ಸನ್‌ಲೈಟ್ ಸಮೀಪ ರಾ.ಹೆ.66ರಲ್ಲಿ ನ.16ರಂದು ಬೆಳಗ್ಗೆ ಓಮಿನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಹೆದ್ದಾರಿ ಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ.

ಮೃತರನ್ನು ಗಣೇಶ ಕೊತ್ವಾಲ(48) ಎಂದು ಗುರುತಿಸಲಾಗಿದೆ.

ಬೈಂದೂರು ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇವರಿಗೆ ಹಿಂದಿನಿಂದ ಬಂದ ಓಮಿನಿ ಕಾರು ಢಿಕ್ಕಿ ಹೊಡೆಯಿತು. ಬಳಿಕ ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿ ದ್ದಾನೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ಗಣೇಶ ಕೊತ್ವಾಲ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News