ಅತ್ಯಾಧುನಿಕ ಶಸ್ತ್ರದ ಯಶಸ್ವಿ ಪ್ರಾಯೋಗಿಕ ಪರೀಕ್ಷೆ: ಉತ್ತರ ಕೊರಿಯ

Update: 2018-11-16 16:46 GMT

ಸಿಯೋಲ್, ನ. 16: ‘ಹೊಸದಾಗಿ ಅಭಿವೃದ್ಧಿಪಡಿಸಲಾದ ಅತ್ಯಾಧುನಿಕ ಶಸ್ತ್ರವೊಂದರ ಪ್ರಾಯೋಗಿಕ ಪರೀಕ್ಷೆಯನ್ನು ನಾಯಕ ಕಿಮ್ ಜಾಂಗ್ ಉನ್ ಉಪಸ್ಥಿತಿಯಲ್ಲಿ ನಡೆಸಲಾಯಿತು ಎಂದು ಉತ್ತರ ಕೊರಿಯದ ಸರಕಾರಿ ಮಾಧ್ಯಮ ಶುಕ್ರವಾರ ವರದಿ ಮಾಡಿದೆ.

ಈ ಬೆಳವಣಿಗೆಯು ಪರಮಾಣು ನಿಶ್ಶಸ್ತ್ರೀಕರಣ ಮಾತುಕತೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರಬಹುದಾಗಿದೆ.

ತನ್ನ ಪರಮಾಣು ಮತ್ತು ಕ್ಷಿಪಣಿ ಕಾರ್ಯಕ್ರಮದ ಬಗ್ಗೆ ಅಮೆರಿಕದೊಂದಿಗೆ ಮಾತುಕತೆ ಪ್ರಕ್ರಿಯೆ ಆರಂಭಿಸಿದ ಬಳಿಕ, ಸುಮಾರು ಒಂದು ವರ್ಷದ ಅವಧಿಯಲ್ಲಿ ಉತ್ತರ ಕೊರಿಯವು ಅಧಿಕೃತವಾಗಿ ಶಸ್ತ್ರಾಸ್ತ್ರ ಪರೀಕ್ಷೆಯ ಬಗ್ಗೆ ಹೇಳಿಕೆಯೊಂದನ್ನು ನೀಡುತ್ತಿರುವುದು ಇದೇ ಮೊದಲು.

ಶಸ್ತ್ರಾಸ್ತ್ರ ಪರೀಕ್ಷೆ ಯಶಸ್ವಿಯಾಗಿದೆ ಎಂದು ಉತ್ತರ ಕೊರಿಯದ ಅಧಿಕೃತ ಸುದ್ದಿ ಸಂಸ್ಥೆ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜನ್ಸಿ ತಿಳಿಸಿದೆ. ಆದರೆ, ಯಾವ ಮಾದರಿಯ ಶಸ್ತ್ರದ ಪರೀಕ್ಷೆ ಮಾಡಲಾಗಿದೆ ಎಂಬುದನ್ನು ಅದು ಹೇಳಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News