ನ.18: ಜಮೀಯ್ಯತುಲ್ ಫಲಾಹ್‌ನಿಂದ ಅಭಿನಂದನಾ ಸಭೆ

Update: 2018-11-17 14:35 GMT

ಮಂಗಳೂರು, ನ.17: ದ.ಕ. ಮತ್ತು ಉಡುಪಿ ಜಿಲ್ಲಾ ಜಮೀಯ್ಯತುಲ್ ಫಲಾಹ್ ವತಿಯಿಂದ ವಿವಿಧ ಕ್ಷೇತ್ರದ ಸಾಧಕರು, ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಭೆಯು ನ.18ರಂದು ಅಪರಾಹ್ನ 2 ಗಂಟೆಗೆ ಕಂಕನಾಡಿಯಲ್ಲಿರುವ ಫಲಾಹ್ ಸಮುದಾಯ ಭವನದಲ್ಲಿ ಜರುಗಲಿದೆ.

ಸಭೆಯಲ್ಲಿ ಸಚಿವರಾದ ಯು.ಟಿ.ಖಾದರ್, ಜಮೀರ್ ಅಹ್ಮದ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್ ಅವರನ್ನು ಸನ್ಮಾನಿಸಲಾಗುವುದು. ಮುಖ್ಯ ಅತಿಥಿಗಳಾಗಿ ಯೆನೆಪೊಯ ವಿವಿಯ ಕುಲಪತಿ ವೈ. ಅಬ್ದುಲ್ಲಾ ಕುಂಞಿ, ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಯು.ಕೆ. ಮೋನು ಕಣಚೂರು, ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಕೆಸಿಸಿಐ ಅಧ್ಯಕ್ಷ ಪಿ.ಬಿ. ಅಬ್ದುಲ್ ಹಮೀದ್, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಪಿ. ಇಬ್ರಾಹೀಂ ಭಾಗವಹಿಸಲಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News