ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಡಿ.6 ರಂದು ಮಾಜಿ ಮುಖ್ಯಮಂತ್ರಿಗಳು, ನೀರಾವರಿ ಸಚಿವರುಗಳ ಸಭೆ

Update: 2018-11-17 16:26 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.17: ರಾಜ್ಯದ ಎಲ್ಲ ನೀರಾವರಿ ಯೋಜನೆಗಳ ಕುರಿತು ಸೂಕ್ತ ನಿಲುವು ತಳೆಯುವ ನಿಟ್ಟಿನಲ್ಲಿ ಚರ್ಚಿಸಲು ಡಿ.6 ರಂದು ಎಲ್ಲ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ನೀರಾವರಿ ಸಚಿವರ ಸಭೆ ಕರೆಯಲು ಇಂದು ನಿರ್ಧರಿಸಲಾಯಿತು.

ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಮಹಾದಾಯಿ ನ್ಯಾಯಾಧೀಕರಣದ ಇತ್ತೀಚಿನ ಬೆಳವಣಿಗೆ ಕುರಿತು ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟವರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇಂದು ನಡೆದ ಸಭೆಯಲ್ಲಿ ಮಹಾದಾಯಿ ನ್ಯಾಯಾಧೀಕರಣ ನೀರು ಹಂಚಿಕೆ ತೀರ್ಪು ನೀಡಿದ ನಂತರ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಲಾಯಿತು.

ರಾಜ್ಯದ ರೈತರ ಹಿತದೃಷ್ಟಿಯಿಂದ ನೀರಿನ ಬಳಕೆಗೆ ಕಾಮಗಾರಿ ಪ್ರಾರಂಭಿಸಲು ಸರಕಾರ ತಯಾರಿ ನಡೆಸಲು ಅನುವಾಗುವಂತೆ ನೀರು ಹಂಚಿಕೆಯ ಗಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಕೇಂದ್ರ ಸರಕಾರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಜೊತೆಗೆ ನಿಯಮ 5(3) ರಡಿ ಸ್ಪಷ್ಟೀಕರಣಕ್ಕೆ ಮನವಿ ಸಲ್ಲಿಸಲಾಗಿದೆ ಹಾಗೂ ಹೆಚ್ಚುವರಿ ನೀರು ಪಡೆಯುವ ನಿಟ್ಟಿನಲ್ಲಿ ಸ್ಪೆಷಲ್ ಲೀವ್ ಪೆಟಿಷನ್ ಸಲ್ಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು. ಆ ಭಾಗದ ರೈತರ ಹಿತಾಸಕ್ತಿ ಕಾಯಲು ಒಟ್ಟಾಗಿ ಶ್ರಮಿಸಲು ತೀರ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News