ಕರ್ನಾಟಕದಲ್ಲಿ ನಾಯಿಗಳ ಸಾಮೂಹಿಕ ಹತ್ಯೆ: ಮನವಿ ಪರಿಶೀಲನೆಗೆ ಸುಪ್ರೀಂ ಒಪ್ಪಿಗೆ

Update: 2018-11-17 16:26 GMT

ಹೊಸದಿಲ್ಲಿ, ನ. 17: ಬೀದಿ ನಾಯಿಗಳ ಸಾಮೂಹಿಕ ಹತ್ಯೆ ಆರೋಪದ ಕುರಿತು ಖಾಸಗಿ ಗುತ್ತಿಗೆದಾರರು ಹಾಗೂ ಕರ್ನಾಟಕದ ನಗರಾಡಳಿತ ಮಂಡಳಿಯ ಮುಖ್ಯ ಅಧಿಕಾರಿಯ ವಿರುದ್ಧ ನ್ಯಾಯಾಂಗ ನಿಂದನಾ ಕ್ರಮ ಕೋರಿ ಸಲ್ಲಿಸಿದ ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಸಕಲೇಶಪುರ ನಗರಾಡಳಿತದ ಮುಖ್ಯಾಧಿಕಾರಿ ವಿಲ್ಸನ್ ವಿ.ಟಿ ಹಾಗೂ ಗುತ್ತಿಗೆದಾರ ವಿ. ಜಾರ್ಜ್ ಅವರಿಗೆ ನ್ಯಾಯಮೂರ್ತಿಗಳಾದ ಎನ್.ವಿ. ರಮಣ ಹಾಗೂ ಎಂ.ಎಂ. ಶಾಂತನ ಗೌಡರ್ ಅವರನ್ನು ಒಳಗೊಂಡ ಪೀಠ ನೋಟಿಸು ಜಾರಿ ಮಾಡಿದೆ ಹಾಗೂ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿದೆ. ದೂರುದಾರರ ಪರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಪ್ರಾಣಿ ಹಕ್ಕು ಹೋರಾಟಗಾರ ನವೀನ್ ಕಾಮತ್ ಅವರ ವಕೀಲ ಸಿದ್ದಾರ್ಥ್ ಗರ್ಗ್, ಸುಪ್ರೀಂ ಕೋರ್ಟ್‌ನ ನಿರ್ದಿಷ್ಟ ನಿರ್ದೇಶನಗಳನ್ನು ಉದ್ದೇಶಪೂರ್ವಕವಾಗಿ ಅನುಸರಿಸದ ಇಬ್ಬರು ಪ್ರತಿಕ್ರಿಯೆದಾರರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಪ್ರಾಣಿಗಳ ಮೇಲೆ ಕ್ರೌರ್ಯ ತಡೆ ಕಾಯ್ದೆ ಹಾಗೂ ಪ್ರಾಣಿಗಳ ಜನನ ನಿಯಂತ್ರಣ ಕಾಯ್ದೆ ಅನುಸರಿಸಬೇಕು.

ಈ ಆದೇಶದಿಂದ ತಪ್ಪಿಸಿಕೊಳ್ಳಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸ್ಥಳೀಯ ಆಡಳಿತ ಹಾಗೂ ಪಂಚಾಯತ್‌ಗೆ ಸುಪ್ರೀಂ ಕೋರ್ಟ್ 2015 ನವೆಂಬರ್ 18ರಂದು ನಿರ್ದೇಶನ ನೀಡಿತ್ತು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News