ಕೇಂದ್ರದ ತಂಡದಿಂದ ಬೆಳೆಹಾನಿ ಪರಿಶೀಲನೆ: ವಾರದೊಳಗೆ ವರದಿ ಸಲ್ಲಿಕೆ

Update: 2018-11-17 16:52 GMT

ಬೆಳಗಾವಿ/ಬೆಂಗಳೂರು, ನ.17: ಜಿಲ್ಲಾ ವ್ಯಾಪ್ತಿಯಲ್ಲಿ ಅನಾವೃಷ್ಟಿಯಿಂದ ಮುಂಗಾರು ಬೆಳೆಹಾನಿ ಆಗಿರುವ ಕುರಿತು ಒಂದು ವಾರದೊಳಗೆ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಪಶು ಸಂಗೋಪನೆ ಇಲಾಖೆಯ ನಿರ್ದೇಶಕ ಮಹೇಶ್ ತಿಳಿಸಿದ್ದಾರೆ.

ಶನಿವಾರ ಸವದತ್ತಿ ತಾಲೂಕಿನ ಹೂಲಿಕಟ್ಟಿ ಕ್ರಾಸ್ ಬಳಿಯ ಹೊಲದಲ್ಲಿ ಹಾನಿಗೊಳಗಾಗಿರುವ ಹತ್ತಿ ಮತ್ತು ಸೂರ್ಯಕಾಂತಿ ಬೆಳೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ವ್ಯಾಪ್ತಿಯಲ್ಲಿ ಬೆಳೆಹಾನಿ ಪರಿಶೀಲನೆ ನಡೆಸಲಾಗಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಯ ಪ್ರಕಾರ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆ: ಸೋಮವಾರ(ನ.19) ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ ಅಮಿತಾಭ ಗೌತಮ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಒಟ್ಟಾರೆ ರಾಜ್ಯದ ಪರಿಸ್ಥಿತಿ ಕ್ರೋಡೀಕರಿಸಿ ಸಿದ್ಧಪಡಿಸುವ ವರದಿಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News