ಮಂಡ್ಯ: ನ.23 ರಂದು ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

Update: 2018-11-17 18:40 GMT

ಮಂಡ್ಯ, ನ.17: ನ.23 ರಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೆರವೇರಿಸುವರು ಎಂದು ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ.

ಶನಿವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 3 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಈ ಸಂಬಂಧ ಅಧಿಕಾರಿಗಳು ವರದಿಯನ್ನು ತಯಾರಿಸಿಸ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ಅಲ್ಲದೇ ಆಡಳಿತ್ಮಕ ಮಂಜೂರಾತಿಗೆ ಅವಶ್ಯವಿರುವ ಕಾಮಗಾರಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

3 ದಿನಗಳ ಕಾಲ ಕೆರೆತೊಣ್ಣೂರಿನಲ್ಲಿ ನಡೆಯುವ ತೊಣ್ಣೂರು ಕೆರೆ ಉತ್ಸವ ಉದ್ಘಾಟನೆ ಮತ್ತು ಕ್ಷೇತ್ರದ ಮೂರು ಸ್ಥಳಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ನೆರವೇರಿಸುವರು. ಕಾರ್ಯಕ್ರಮ ಸಮರ್ಪಕವಾಗಿ ನಡೆಯಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಯಾಲಕ್ಕಿಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News