ರಣಜಿ ಆಡಲು ಶಮಿಗೆ ಬಿಸಿಸಿಐ ಅನುಮತಿ

Update: 2018-11-17 18:41 GMT

ಕೋಲ್ಕತಾ, ನ.17: ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿಗೆ ಕೇರಳ ವಿರುದ್ಧ ಮಂಗಳವಾರ ಆರಂಭವಾಗಲಿರುವ ರಣಜಿ ಟ್ರೋಫಿ ‘ಬಿ’ಗುಂಪಿನ ಪಂದ್ಯದಲ್ಲಿ ಬಂಗಾಳದ ಪರ ಆಡಲು ಬಿಸಿಸಿಐ ಅನುಮತಿ ನೀಡಿದೆ. ಆದರೆ, ಅವರಿಗೆ ಪ್ರತಿ ಇನಿಂಗ್ಸ್ ನಲ್ಲಿ 15 ಓವರ್ ಮಾತ್ರ ಬೌಲಿಂಗ್ ಮಾಡಬೇಕೆಂಬ ಷರತ್ತು ವಿಧಿಸಿದೆ.

ಮುಂದಿನ ತಿಂಗಳು ಆಸ್ಟ್ರೇಲಿಯದಲ್ಲಿ ಆರಂಭವಾಗಲಿರುವ ಟೆಸ್ಟ್ ಸರಣಿಗೆ ಶಮಿ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News