ಪುಂಜಾಲಕಟ್ಟೆ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು

Update: 2018-11-18 07:05 GMT

ಪುಂಜಾಲಕಟ್ಟೆ, ನ. 18: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಪುಂಜಾಲಕಟ್ಟೆ ಕಾಲೇಜಿನ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ  ಮೃತಪಟ್ಟ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಹುನ್ಸೇಕಟ್ಟೆ ನಿವಾಸಿ ಕಾವ್ಯ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕಾವ್ಯ ಪುಂಜಾಲಕಟ್ಟೆ ಕಾಲೇಜಿನ ದ್ವೀತಿಯ ಬಿ.ಕಾಂ. ವಿದ್ಯಾರ್ಥಿನಿ ಎಂದು ಹೇಳಲಾಗುತ್ತಿದೆ.

ಈಕೆ  ಕಳೆದ ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಮಂಗಳೂರಿನ  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News