ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಲು ಮನವಿ

Update: 2018-11-18 11:28 GMT

ಉಡುಪಿ, ನ.18: ಪಡುಬಿದ್ರೆ ಗ್ರಾಪಂ ವ್ಯಾಪ್ತಿಯಲ್ಲಿ 2017-18ನೇ ಸಾಲಿಗೆ ಬಸವ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿದ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಸುಮಾರು 44 ಮಂದಿ ಫಲಾ ನುಭವಿಗಳಿಗೆ ಮಂಜೂರಾತಿ ಆದೇಶ ದೊರಕಿಸಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ. ಮೊದಿನಬ್ಬ ಹಾಗೂ ಪಡುಬಿದ್ರಿ ಗ್ರಾಪಂ ಸದಸ್ಯ ಹಸನ್ ಬಾವ ಶನಿವಾರ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಅರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಫಲಾನುಭವಿಗಳು ಸಲ್ಲಿಸಿರುವ ಮನವಿಯನ್ನು ಪಡುಬಿದ್ರಿ ಗ್ರಾಪಂ ಅನು ಮೋದಿಸಿ ಮಂಜೂರಾತಿಗಾಗಿ ರಾಜೀವಗಾಂಧಿ ವಸತಿ ನಿಗಮಕ್ಕೆ ಸಲ್ಲಿಸಿದೆ. ಆದರೆ ಇದುವರೆಗೂ ವಸತಿ ನಿಗಮದ ಅಧಿಕಾರಿಗಳು ಮನೆ ಮಂಜೂರಾತಿ ಆದೇಶ ನೀಡಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಜಿಲ್ಲೆಯ ಮುಸ್ಲಿಂ ಸಮುದಾಯವು ಸರಕಾರದ ವಿವಿಧ ಇಲಾಖೆಗಳಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಸಮಸ್ಯೆಗಳ ಪರಿಹಾರಕ್ಕಾಗಿ ಕನಿಷ್ಟ 3 ತಿಂಗಳಿಗೊಮ್ಮೆ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಫಲಾನುಭವಿಗಳು, ಸಂಕಷ್ಟಕ್ಕೊಳಗಾದವರು ಮತ್ತು ಸಮುದಾಯದ ಮುಖಂಡರನ್ನೊಳಗೊಂಡು ಕುಂದುಕೊರತೆಗಳ ಸಭೆಯನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಸಲು ಆದೇಶ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News