ಸಹಕಾರಿ ಸಂಘದ ನಿವೃತ್ತ ನೌಕರರಿಗೆ ಪಿಂಚಣಿ: ರಾಜೇಂದ್ರ ಕುಮಾರ್

Update: 2018-11-18 16:47 GMT

ಕುಂದಾಪುರ, ನ.18: ಕೃಷಿ ಪತ್ತಿನ ಸಹಕಾರ ಸಂಘಗಳ ಜಿಲ್ಲಾ ಸಹಕಾರಿ ಸಂಘದ ನಿವೃತ್ತ ನೌಕರರಿಗೆ ಈಗಾಗಲೇ 5000ರೂ. ಪಿಂಚಣಿ ನೀಡಲಾಗು ತ್ತಿದ್ದು, ಅದನ್ನು ಎಲ್ಲ ಸಹಕಾರಿ ಸಂಘದ ನಿವೃತ್ತ ನೌಕರರಿಗೆ ನೀಡಲು ಪ್ರಯತ್ನಿಸ ಲಾಗುವುದು ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿ ಯನ್, ಕುಂದಾಪುರ ತಾಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ 65ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ರವಿವಾರ ಕುಂದಾಪುರದ ರೋಟರಿ ಲಕ್ಷ್ಮಿನರಸಿಂಹ ಕಲಾ ಮಂದಿರದಲ್ಲಿ ಆಯೋಜಿಸಲಾದ ಕುಂದಾಪುರ ತಾಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಡಿಮೆ ನೀರು ಹಾಗೂ ಕಡಿಮೆ ಜಾಗದಲ್ಲಿ ಹೆಚ್ಚು ಉತ್ಪನ್ನ ಬೆಳೆಯುವ ಇಸ್ರೇಲ್ ಮಾದರಿಯ ಕೃಷಿ ಅಧ್ಯಯನಕ್ಕೆ ಪ್ರತಿ ತಾಲೂಕಿನಿಂದ ಇಬ್ಬರು ರೈತರನ್ನು ಇಸ್ರೇಲ್‌ಗೆ ಕಳುಹಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳದ ಕೃಷಿಯಲ್ಲಿ ಸಹಕಾರ ಸಂಸ್ಥೆಗಳ ಪ್ರಮುಖ ಪಾತ್ರದ ಕುರಿತು ಕರ್ನಾಟಕ ಇನ್ಸ್‌ಟ್ಯೂಟ್ ಆ್ ಮ್ಯಾನೇಜ್ ಮೆಂಟ್‌ನ ಉಪನ್ಯಾಸಕಿ ಬಿಂದು ನಾಯರ್ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ವಿವಿಧ ವ್ಯವಸಾಯ ಸೇವಾ ಸಹಕಾರಿ ಸಂಘಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ನೌಕರರು ಹಾಗೂ ಕರ್ನಾಟಕ ಇನ್ಸ್‌ಟ್ಯೂಟ್ ಆ್ ಮ್ಯಾನೇಜ್ ಮೆಂಟ್ ನಡೆಸುವ ರಾಜ್ಯಮಟ್ಟದ ಪರೀಕ್ಷೆಯಲ್ಲಿ 5ನೇ ರ್ಯಾಂಕ್ ಗಳಿಸಿದ ಮಾನಂಜೆಯ ಕೆ.ಸತೀಶ್ ಭಟ್ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ವಹಿಸಿದ್ದರು. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಸ್.ದಿನಕರ ಶೆಟ್ಟಿ, ಜಿಲ್ಲಾ ಸಹಕಾರಿ ಉಪ ನಿಬಂಧಕ ಪ್ರವೀಣ್ ಬಿ.ನಾಯಕ್, ಕುಂದಾಪುರದ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ ಎಂ.ಜೆ., ನಿವೃತ್ತ ಅಪರ ನಿಬಂಧಕ ಎಚ್.ಎಸ್.ನಾಗ ರಾಜಯ್ಯ, ಜಿಲ್ಲಾ ಸಹಕಾರಿ ಯೂನಿಯನ್‌ನ ವಿಶೇಷಾಧಿಕಾರಿ ಅರುಣ್ ಕುಮಾರ್ ಎಸ್.ವಿ., ಕಂಬದಕೋಣೆಯ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ತಾಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರ ಒಕ್ಕೂಟದ ಅಧ್ಯಕ್ಷ ಎಚ್. ರಾಜೀವ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಸಹಕಾರಿ ಯೂನಿಯನ್‌ನ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ್ ಎಸ್.ಪಿ. ವಂದಿಸಿದರು. ರಾಜಶೇಖರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News