ಕುಮಾರಸ್ವಾಮಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುತ್ತಾರೆ: ಬಂಡೆಪ್ಪ ಕಾಶೆಂಪೂರ

Update: 2018-11-18 17:16 GMT

ಹಾವೇರಿ, ನ.19: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಂಡಿತವಾಗಿಯೂ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಮಾಡುತ್ತಾರೆ. ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲಕರ ಜತೆ ಸಭೆ ನಡೆಸಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದ್ದಾರೆ.

ಕುಮಾರಸ್ವಾಮಿಯವರೇ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಖಂಡಿತ ಕಬ್ಬು ಬಾಕಿ ಸಮಸ್ಯೆ ಪರಿಹಾರ ಮಾಡಲಿದ್ದಾರೆ. ಇವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಆದಾಯ ಹೆಚ್ಚಾಗಿದೆ. ರಾಜ್ಯದ 28 ಲಕ್ಷ ರೈತರ ಸಾಲಮನ್ನಾ ಮಾಡಿದ್ದೇವೆ. ರೈತರಿಗೆ ಉಪಯುಕ್ತ ಯೋಜನೆ ಜಾರಿಗೆ ಸರಕಾರ ಬದ್ಧ ಎಂದರು.

ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲಕರ ಸಭೆ ನಡೆಸಿ ಇಬ್ಬರ ಸಮಸ್ಯೆಯನ್ನು ಪರಿಹಾರ ಮಾಡಲಿದ್ದಾರೆ. ಡಿಸೆಂಬರ್ ತಿಂಗಳಿನಲ್ಲಿ ಕಾಯಕ ಯೋಜನೆ ಜಾರಿಯಾಗಲಿದ್ದು, ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News