ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರ ಧರಣಿ

Update: 2018-11-19 06:52 GMT

  ಬೆಂಗಳೂರು, ನ.19: ಸಾಲಮನ್ನಾ, ಕಬ್ಬಿಗೆ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಯನ್ನು ಮುಂದಿಟ್ಟುಕೊಟ್ಟು ರಾಜ್ಯ ವಿವಿಧೆಡೆಯಿಂದ ಆಗಮಿಸಿರುವ ರೈತರು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ.

ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಭೀತಿ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸರಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದ ರೈತರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಎರಡು ಗಂಟೆಯಲ್ಲಿ ಸರಕಾರದ ನಿಲುವೇನೆಂದು ಸ್ಪಷ್ಟಪಡಿಸಬೇಕೆಂದು ಹೋರಾಟಗಾರರು ಗಡುವು ನೀಡಿದ್ದಾರೆ ಎಂದು ವರದಿಯಾಗಿದೆ.

ರೈತ ಮಹಿಳೆಯ ಬಗ್ಗೆ ಹಗುರವಾಗಿ ಮಾತನಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಕ್ಷಮೆ ಕೋರಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News