ಉಡುಪಿಯ ಹಲವೆಡೆ ಮಳೆ
Update: 2018-11-19 12:23 IST
ಉಡುಪಿ, ನ.18: ಉಡುಪಿ ನಗರ ಸೇರಿದಂತೆ ಹಲವೆಡೆ ಇಂದು ಬೆಳಗ್ಗೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಕಂಡುಬಂದಿದ್ದು, 11 ಗಂಟೆ ಸುಮಾರಿಗೆ ಉಡುಪಿ ನಗರ, ಉದ್ಯಾವರ, ಅಂಬಾಗಿಲು, ಮಣಿಪಾಲ ಅಲೆವೂರು, ಕಲ್ಯಾಣಪುರ ಸೇರಿದಂತೆ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿದಿದೆ.
ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲಾದ್ಯಂತ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.