ದೇವೇಗೌಡ-ಸಿದ್ದರಾಮಯ್ಯ ಸಮಾಲೋಚನೆ

Update: 2018-11-19 15:30 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ. 19: ರಾಜ್ಯದಲ್ಲಿ ರೈತರ ಪ್ರತಿಭಟನೆ, ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯ ಸುತ್ತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಸೋಮವಾರ ಇಲ್ಲಿನ ಕುಮಾರಕೃಪಾ ಅತಿಥಿಗೃಹದಲ್ಲಿ ಸಮಾಲೋಚನೆ ನಡೆಸಿದ ಉಭಯ ನಾಯಕರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಬೆಳವಣಿಗೆಗಳು, ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News