ನ.23ರಿಂದ 25ರವರೆಗೆ ಮಿಂಚಿನ ನೋಂದಣಿ ಅಭಿಯಾನ

Update: 2018-11-19 16:19 GMT

ಬೆಂಗಳೂರು, ನ.19: ವಿಶೇಷ ಮತದಾರ ನೋಂದಣಿ ಅಭಿಯಾನ(ಮಿಂಚಿನ ನೋಂದಣಿ)ವನ್ನು ನ.23, 24 ಹಾಗೂ 25ರಂದು ಎಲ್ಲ ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಚುನಾವಣಾಧಿಕಾರಿಯವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ನು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ಕಾರ್ಯಕ್ರಮ ಪ್ರಗತಿಯಲ್ಲಿದ್ದು, ಈ ಸಂದರ್ಭದಲ್ಲಿ ಯಾವುದೇ ಮತದಾರನು ಬಿಟ್ಟು ಹೋಗಬಾರದು ಎಂಬ ಕಾರಣಕ್ಕಾಗಿ ವಿಶೇಷ ಮತದಾರ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ಮತಗಟ್ಟೆ ಮಟ್ಟದ ಅಧಿಕಾರಿಗಳು 2019ರ ಕರಡು ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸೇರ್ಪಡೆ ಹಾಗೂ ತೆಗೆದು ಹಾಕಲಾಗಿರುವ ಮತದಾರರ ವಿವರಗಳ ಪಟ್ಟಿಯೊಂದಿಗೆ ಆಯಾ ಮತಗಟ್ಟೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಹಾಗೂ ತಿಳಿವಳಿಕೆಗಾಗಿ ಪ್ರಕಟಿಸಲಾಗಿದ್ದು, ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿ ಕೊಳ್ಳಬಹುದಾಗಿದೆ. ಹೊಸ ಅರ್ಜಿಗಳ ನಮೂನೆ-6, 7, 8 ಮತ್ತು 8ಎ ಅರ್ಜಿಗಳ ನಮೂನೆಗಳನ್ನು ಬಿಎಲ್‌ಒಗಳಿಂದ ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಹೆಸರು, ವಯಸ್ಸು, ತಂದೆ ಹೆಸರು ಇತ್ಯಾದಿಗಳಿಗೆ ತಿದ್ದುಪಡಿ ಮಾಡುವ ಅವಕಾವಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News