ನ.24ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Update: 2018-11-19 17:12 GMT

ಉಡುಪಿ, ನ.19: ಉಡುಪಿ ಜಿಲ್ಲಾ ಬಾಲಭವನದಲ್ಲಿ ನ.24ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಸರಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಂದ, 5ರಿಂದ 16 ವರ್ಷದೊಳಗಿನ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರಕಲೆ, ಕನ್ನಡಗೀತೆ, ರಂಗೋಲಿ ಮತ್ತು ವೇಷಭೂಷಣ ಸ್ಪಧೆಗಳನ್ನು ಏರ್ಪಡಿಸಲಾಗಿದೆ.

6 ರಿಂದ 8 ವರ್ಷ, 9ರಿಂದ 12 ವರ್ಷ ಮತ್ತು 13ರಿಂದ 16 ವರ್ಷದ ಮಕ್ಕಳಿಗೆ ಚಿತ್ರಕಲೆ, ಕನ್ನಡಗೀತೆ, ರಂಗೋಲಿ ಮತ್ತು ವೇಷಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ, ದೂರವಾಣಿ ಸಂಖ್ಯೆ; 2574978ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News