ಕಾಪು: ಮತದಾರರ ಪಟ್ಟಿ ವಿಶೇಷ ನೋಂದಣಿ ಕಾರ್ಯಕ್ರಮ

Update: 2018-11-19 17:15 GMT

ಉಡುಪಿ, ನ.19: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ, ಕಾಪು ಕ್ಷೇತ್ರದ ಮತದಾರರ ಪಟ್ಟಿಯನ್ನು 2019ರ ಜ.1ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಅ.10 ರಂದು ಆಯಾ ಮತದಾನ ಕೇಂದ್ರಗಳಲ್ಲಿ ಉಡುಪಿ ತಾಲೂಕು ಕಚೇರಿ ಹಾಗೂ ಕುಂದಾಪುರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪ್ರಕಟಿಸಲಾಗಿದೆ 2019ರ ಜ.1ರಂದು 18 ವರ್ಷ ತುಂಬಿದ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸಿನವರು, ಈವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸದೇ ಇದ್ದವರು ಅಥವಾ ಹೆಸರು ಬಿಟ್ಟು ಹೋಗಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ತಪ್ಪುಗಳಿದ್ದಲ್ಲಿ ಸರಿಪಡಿಸಲು ನ.23, 24 ಮತ್ತು 25ರಂದು ವಿಶೇಷ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ದಿನಗಳಲ್ಲಿ ಆಯಾ ಮತಗಟ್ಟೆಗಳಲ್ಲಿರುವ ಮತಗಟ್ಟೆ ಮಟ್ಟದ ಅಧಿಕಾರಿಯವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸುವವರು ತಮ್ಮ ಮುಖ ಪೂರ್ಣವಾಗಿ ಕಾಣಿಸುವ ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ ದೊಂದಿಗೆ ವಯಸ್ಸಿನ ಹಾಗೂ ವಾಸ್ತವ್ಯದ ಬಗ್ಗೆ ಪೂರಕವಾದ ದಾಖಲೆ ಗಳೊಂದಿಗೆ ನಮೂನೆ 6 ರಲ್ಲಿಯೂ, ದಾಖಲಾಗಿರುವ ಮತದಾರರ ಹೆಸರು ಗಳ ಬಗ್ಗೆ ಆಕ್ಷೇಪಣೆಗಳಿದ್ದರೆ ಹಾಗೂ ಮತದಾರರ ಪಟ್ಟಿಯಲ್ಲಿ ಈಗಾಗಲೇ ಹೆಸರು ನೋಂದಾಯಿಸಿರುವ ವ್ಯಕ್ತಿ ಮೃತಪಟ್ಟಿದ್ದರೆ ಅಥವಾ ವಿಳಾಸ ಬದಲಾ ವಣೆಯಾಗಿದ್ದರೆ(ವಲಸೆ ಹೋಗಿದ್ದರೆ) ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕುವ ಬಗ್ಗೆ ನಮೂನೆ 7ರಲ್ಲಿಯೂ, ಮತದಾರರ ಪಟ್ಟಿಯಲ್ಲಿ ಯಾವುದೇ ನಮೂದು ತಪ್ಪಾಗಿ ಮುದ್ರಿಸಲ್ಪಟ್ಟಿದ್ದರೆ ಅದನ್ನು ಸರಿಪಡಿಸುವ ಬಗ್ಗೆ ಅರ್ಜಿಯನ್ನು ನಮೂನೆ -8 ರಲ್ಲಿಯೂ, ಒಬ್ಬ ವ್ಯಕ್ತಿಯು ತನ್ನ ಹೆಸರನ್ನು ಅದೇ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಇನ್ನೊಂದು ಭಾಗಕ್ಕೆ ವರ್ಗಾ ಯಿಸುವ ಬಗ್ಗೆ ಅರ್ಜಿಯನ್ನು ನಮೂನೆ -8 ಎ ರಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಆಯಾ ಮತಗಟ್ಟೆಗಳಲ್ಲಿ, ಮತಗಟ್ಟೆ ಮಟ್ಟದ ಅಧಿಕಾರಿ ಯವರಿಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಉಡುಪಿ ತಾಲೂಕು ಕಚೇರಿ ಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಅಗತ್ಯ ಮಾಹಿತಿಗಾಗಿ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 0820-2521198 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News