×
Ad

ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Update: 2018-11-20 18:00 IST

ಶಿವಮೊಗ್ಗ, ನ. 20: ವೇಗವಾಗಿ ಆಗಮಿಸಿದ ಕೆಎಸ್ಆರ್ಟಿಸಿ ಬಸ್‍ವೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೊರವಲಯ ಮಾಚೇನಹಳ್ಳಿ ಗ್ರಾಮದ ಎನ್.ಹೆಚ್.206 ರಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿ ನಿವಾಸಿ ಗಣಪತಿ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ಭದ್ರಾವತಿ ಪಟ್ಟಣದಿಂದ ಶಿವಮೊಗ್ಗ ಮಾರ್ಗವಾಗಿ ತೀರ್ಥಹಳ್ಳಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News