ಶ್ರೇಷ್ಠ ಪುಸ್ತಕ ಅಕಾಡೆಮಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Update: 2018-11-20 13:28 GMT

 ಉಡುಪಿ, ನ.20: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರೇಷ್ಠ ಪುಸ್ತಕ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಲಿದ್ದು, ಅದಕ್ಕಾಗಿ 2018-19ನೆ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಟ 2 ಪ್ರಶಸ್ತಿಗಳನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ 25 ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು. ಜನವರಿ 2017ರಿಂದ ಡಿಸೆಂಬರ್ 2018ರ ಒಳಗೆ ಮೇಲ್ಕಂಡ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟ ಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ.

ಲೇಖಕರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿ ಗಳನ್ನು 2019ರ ಜ.5ರೊಳಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಇವರಿಗೆ ಕಳುಹಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ www.kstacademy.in ಅನ್ನು ಸಂಪರ್ಕಿ ಸುವಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News