ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಾಡಿ ಬಿಲ್ಡರ್ ಹತ್ಯೆ

Update: 2018-11-20 13:43 GMT

ಬೆಂಗಳೂರು, ನ.20: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಾಡಿ ಬಿಲ್ಡರ್ ಒಬ್ಬನನ್ನು ಹತ್ಯೆಗೈದಿರುವ ಘಟನೆ ಇಲ್ಲಿನ ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಶಿವಾಜಿನಗರದ ಹಳೆ ಸಿಮೇಂಟ್ರಿ ರಸ್ತೆಯಲ್ಲಿ ಬಾಡಿ ಬಿಲ್ಡರ್ ಇರ್ಫಾನ್ ಅನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಇರ್ಫಾನ್, ವ್ಯಾಯಾಮ ಮುಗಿಸಿ ಮನೆಗೆ ವಾಪಸ್ಸು ಆಗುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಶಿವಾಜಿನಗರದಲ್ಲಿಯೇ ಮೀನು ಮಾರಾಟ ಅಂಗಡಿ ಇಟ್ಟುಕೊಂಡಿದ್ದ ಇರ್ಫಾನ್ ಅನ್ನು ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೈಗೈದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ಸಂಬಂಧ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News