ನ.23 ರಿಂದ ವಿಶೇಷ ಮತದಾರರ ನೋಂದಣಿ ಅಭಿಯಾನ

Update: 2018-11-20 14:22 GMT

ಬೆಂಗಳೂರು, ನ.20: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ-2019 ಪ್ರಗತಿಯಲ್ಲಿದ್ದು, ಯಾರೊಬ್ಬರೂ ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗ ನ.23 ರಿಂದ 25ರವರೆ ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಂಡಿದೆ.

ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋದ ಹಾಗೂ ಯುವ ಮತದಾರರನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗ ಈ ಅಭಿಯಾನ ಹಮ್ಮಿಕೊಂಡಿದ್ದು, ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಮೂರು ದಿನಗಳ ಕಾಲ ನಡೆಯಲಿದೆ. ಆಯಾ ಜಿಲ್ಲಾಧಿಕಾರಿಗಳು ಅಭಿಯಾನವನ್ನು ಆಯೋಜಿಸುತ್ತಾರೆ. ಈಗಾಗಲೇ ಮತಗಟ್ಟೆ ಅಧಿಕಾರಿಗಳು 2019ರ ಕರಡು ಮತದಾರರ ಪಟ್ಟಿಯನ್ನು ಆಯಾ ಮತಗಟ್ಟೆಗಳಲ್ಲಿ ಪ್ರಕಟಿಸಿದ್ದಾರೆ.

ಹೊಸ ಅರ್ಜಿಗಳ ನಮೂನೆ 6, 7, 8 ಮತ್ತು 8 (ಎ) ಗಳನ್ನು ಮತಗಟ್ಟೆ ಅಧಿಕಾರಿಗಳಿಂದ ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅದೇ ರೀತಿ ಹೆಸರು, ವಯಸ್ಸು, ತಂದೆ ಹೆಸರು ಇತ್ಯಾದಿ ತಿದ್ದುಪಡಿಗಳಿಗೂ ಅವಕಾಶವಿರುತ್ತದೆ. ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಚುನಾವಣಾ ಆಯೋಗ ಪ್ರಕಟನೆಯಲ್ಲಿ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News