ಪ್ಯಾರಾ ಒಲಿಂಪಿಕ್ಸ್‌ಗಾಗಿ ಪ್ರತ್ಯೇಕ ಸ್ಟೇಡಿಯಂ: ಡಾ.ಜಿ.ಪರಮೇಶ್ವರ್

Update: 2018-11-20 14:23 GMT

ಬೆಂಗಳೂರು, ನ.20: ಪ್ಯಾರಾ ಒಲಿಂಪಿಕ್ಸ್‌ಗಾಗಿಯೇ ಪ್ರತ್ಯೇಕ ಸ್ಟೇಡಿಯಂ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದರು.

ಇಂಡೋನೇಷಿಯಾದಲ್ಲಿ ನಡೆದ ಪ್ಯಾರಾ ಏಷಿಯನ್ ಗೇಮ್ಸ್ ನಲ್ಲಿ 9 ಪದಕ ಪಡೆದ ಏಳು ವಿಕಲಚೇತನ ಕ್ರೀಡಾಪಟುಗಳಿಗೆ ಸನ್ಮಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಂದಿನ ಕ್ರಿಯಾ ಯೋಜನೆ ಸಿದ್ಧಪಡಿಸುವ ಸಂದರ್ಭದಲ್ಲಿ ಪ್ಯಾರಾ ಒಲಿಂಪಿಕ್ಸ್‌ಗಾಗಿಯೇ ಪ್ರತ್ಯೇಕ ಸ್ಟೇಡಿಯಂ ನಿರ್ಮಿಸುವ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದರು.

ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಚಿನ್ನ ಗಳಿಸಿದ ರಕ್ಷಿತಾ, ಬೆಳ್ಳಿ ಹಾಗೂ ಕಂಚು ಪದಕ ವಿಜೇತೆ ವಿ. ರಾಧಾ, ಜಾವಲಿ ಥ್ರೋ ವಿಭಾಗದಲ್ಲಿ ಕಂಚು ಪಡೆದ ಎನ್.ಎಸ್. ರಮ್ಯಾ, ಪ್ಯಾರ ಬ್ಯಾಡ್ಮಿಂಟನ್‌ನಲ್ಲಿ ಕಂಚು ವಿಜೇತ ಆನಂದ ಕುಮಾರ್, ಚೆಸ್‌ನಲ್ಲಿ ಚಿನ್ನದ ವಿಜೇತ ಕಿಶನ್ ಗಂಗೋಲಿ, ಪ್ಯಾರಾ ಪವರ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ವಿಜೇತ ಫರ್ಮಾನ್ ಬಾಷಾ ಹಾಗೂ ಶಕಿನಾ ಕತುನ್‌ಗೆ ಉಪಮುಖ್ಯಮಂತ್ರಿ ಪರಮೇಶ್ವರ್ ಅಭಿನಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News