ನ. 22ರಂದು ಬೀಡಿನಗುಡ್ಡೆಯಲ್ಲಿ ಮೋದಿ ಕಾರ್ಯಕ್ರಮ ನೇರಪ್ರಸಾರ

Update: 2018-11-20 15:18 GMT

ಉಡುಪಿ, ನ.20: ಪೈಪ್ ಮೂಲಕ ಮನೆಮನೆಗೆ ಗ್ಯಾಸ್ ವಿತರಿಸುವ ಕೇಂದ್ರ ಸರಕಾರದ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ನ.22ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಅಪರಾಹ್ನ 2:30ಕ್ಕೆ ಚಾಲನೆ ನೀಡಲಿದ್ದು, ಇದರ ನೇರಪ್ರಸಾರವನ್ನು ಉಡುಪಿ ಬೀಡಿನಗುಡ್ಡೆ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಉಡುಪಿಯ ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಭಾಗವಹಿಸಲಿರುವರು. ಈ ಸಂದರ್ಭ ಪ್ರಧಾನಿ ಅವರೊಂದಿಗೆ ನೇರ ಚರ್ಚೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ನ.22ರಂದು ಸಂಜೆ 5 ಗಂಟೆಗೆ ಅಜ್ಜರಕಾಡು ಪುರಭವನದಲ್ಲಿ ಕೇಂದ್ರ ಸಚಿವ ದಿ.ಅನಂತ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾ ಗಿದ್ದು, ಇದರಲ್ಲಿ ಪೇಜಾವರ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ನುಡಿನಮನ ಸಲ್ಲಿಸಲಿರು ವರು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್, ಮುಖಂಡರಾದ ಸಂಧ್ಯಾ ರಮೇಶ್, ಪ್ರಭಾಕರ್ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News