ಬೆಂಬಲಿಗರಿಗೆ ಹಣ ಹಂಚಿದ ಆರೋಪ: ಮಾಜಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

Update: 2018-11-20 15:45 GMT

ಜೈಪುರ,ನ.20: ವಿಧಾನಸಭಾ ಚುನಾವಣೆಗೆ ತೆರಳುತ್ತಿರುವ ರಾಜಸ್ಥಾನದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿಯ ಮಾಜಿ ಶಾಸಕ ಗ್ಯಾನ್ ದೇವ್ ಅಹುಜಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಗ್ಯಾನ್‌ದೇವ್ ಅವರು ಸೋಮವಾರ ನಾಮಪತ್ರ ಸಲ್ಲಿಕೆಗೆ ಮುನ್ನ ರ್ಯಾಲಿಯೊಂದನ್ನು ನಡೆಸಿದ ಸಂದರ್ಭದಲ್ಲಿ ತನ್ನ ಬೆಂಬಲಿಗರಿಗೆ ಹಣವನ್ನು ವಿತರಿಸಿದ್ದರೆಂದು ಆರೋಪಿಸಲಾಗಿದೆ.

ಅಹುಜಾ ಅವರು ತನ್ನ ಬೆಂಬಲಿಗರಿಗೆ ಹಣವನ್ನು ವಿತರಿಸುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆದ ಆನಂತರ ಅವರ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣದ ತನಿಖೆಯನ್ನು ಸಿಐಡಿ (ಕೈಂಬ್ರಾಂಚ್)ಗೆ ಹಸ್ತಾಂತರಿಸಲಾಗಿದೆಯೆಂದು ಮೂಲಗಳು ತಿಳಿಸಿವೆ.ಮೂರು ಸಲ ಬಿಜೆಪಿ ಶಾಸಕರಾಗಿದ್ದ ಅಹುಜಾ ಅವರಿಗೆ ಈ ಸಲ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯು ಟಿಕೆಟ್ ನಿರಾಕರಿಸಿದ್ದರಿಂದ ಅವರು ರಾಜಸ್ಥಾನದ ಸಂಗಾನೇರ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ರಾಮಘರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರಾದರೂ, ಈ ಸಲ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News