ಸಾ.ರಾ.ಗೋವಿಂದು ಪುತ್ರನ ವಿರುದ್ಧ ದೂರು

Update: 2018-11-20 16:43 GMT

ಬೆಂಗಳೂರು, ನ.20: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಪುತ್ರ ಅನೂಪ್ ಎಂಬಾತ, ವ್ಯಕ್ತಿಯೋರ್ವನನ್ನು ಅಪಹರಿಸಿ, ಹಲ್ಲೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹರೀಶ್ ಎಂಬುವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ: ಹರೀಶ್ ಅವರಿಗೆ ಮೊಬೈಲ್ ಮೂಲಕ ಕರೆ ಮಾಡಿದ ಅನೂಪ್ ಬಸವೇಶ್ವರ ನಗರದ ಪವಿತ್ರ ಪ್ಯಾರಡೈಸ್ ಬಳಿ ಬರುವಂತೆ ಹೇಳಿದ್ದ ಎನ್ನಲಾಗಿದೆ. ಅಲ್ಲಿಗೆ ಬಂದ ಹರೀಶ್‌ನನ್ನು ಅಪಹರಿಸಿ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಹರೀಶ್, ಸದಾಶಿವನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಮೇರೆಗೆ ಅನೂಪ್ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈ ಗೊಂಡಿರುವುದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News