ಸಿಎಂಗೆ ಬರೆದ ಪತ್ರದ ಬಗ್ಗೆ ಚರ್ಚೆಯಾಗುತ್ತಿಲ್ಲ: ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಬೇಸರ

Update: 2018-11-20 17:57 GMT

ಮೈಸೂರು,ನ.20: ಕಾವೇರಿ ನೀರು ಪಡೆಯುವ ತಮಿಳುನಾಡು ನೆರೆ ಹಾವಳಿಯಿಂದ ಸಂಕಷ್ಟಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಗೆ ನೆರವಾಗಬೇಕು ಎಂಬ ಬಗ್ಗೆ ಸಿಎಂ ಅವರಿಗೆ ತಾವು ಬರೆದ ಪತ್ರದ ಬಗ್ಗೆ ಮಾಧ್ಯಮ ಸೇರಿದಂತೆ ಎಲ್ಲಿಯೂ ಚರ್ಚೆಯೇ ಆಗುತ್ತಿಲ್ಲ. ಇದು ಯಾರಿಗೂ ಬೇಡದ ವಿಷಯವಾಗಿರಬೇಕು ಎಂದು ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ವಿಷಾದಿಸಿದರು. 

ನಗರದ ಶಾರದವಿಲಾಸ ಶತಮಾನೋತ್ಸವ ಭವನದಲ್ಲಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್‍ಮೂರ್ತಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಮಂಗಳವಾರ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಇಷ್ಟೊತ್ತಿಗಾಗಲೇ ಮಾಧ್ಯಮಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆ ಆಗಬೇಕಿದ್ದ ಗಂಭೀರ ವಿಷಯವಿದು. ಆದರೆ ಯಾರಿಗೂ ಇದು ಬೇಡದ ವಿಷಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಕೆಆರ್‍ಎಸ್ ಉದ್ಯಾನವನದ ಬಳಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿಪಡಿಸುವ 1200 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸರ್ದಾರ್ ವಲ್ಲಭಾಯ್ ಪಟೇಲ್ ಅವರ 182 ಪ್ರತಿಮೆ ನಿರ್ಮಾಣ ಮಾಡಿದ್ದಕ್ಕೆ ಅದೇ ರೀತಿ ತಾವೂ ಮಾಡಬೇಕು ಎಂದು ಹೊರಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಜನತೆಯೇ ಇದಕ್ಕೆ ಅವಕಾಶ ನೀಡುವುದಿಲ್ಲ. ರೈತರಿಗೆ ಕಬ್ಬಿಗೆ ಬೆಂಬಲ ಬೆಲೆ ನೀಡಲು ಇವರ ಬಳಿ ಹಣವಿಲ್ಲ. ಅಂತಹದರಲ್ಲಿ ಈ ಬೃಹತ್ ಯೋಜನೆ ಮಾಡುತ್ತಾರೆಯೇ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News