ನ.26ರಂದು ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ

Update: 2018-11-21 06:43 GMT

ಬಂಟ್ವಾಳ, ನ.21: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಅವರ ಪದಗ್ರಹಣ ಸಮಾರಂಭ ಮತ್ತು ಕಾಂಗ್ರೆಸ್ ಕಾರ್ಯಕರ್ತ ರ ಸಭೆಯು ನ‌‌.26ರಂದು ಬೆಳಗ್ಗೆ 10:30ಕ್ಕೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಿ.ಸಿ.ರೋಡ್ ನ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಯು.ಬಿ‌.ವೆಂಕಟೇಶ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಪಕ್ಷದ ಮುಖಂಡರು ಭಾಗವಹಿಸುವರು ಎಂದು ಹೇಳಿದರು.

ನ.25ರಂದು ಬಂಟ್ವಾಳ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ:
ಬಂಟ್ವಾಳ ಇಂದಿನ ಕ್ಯಾಂಟೀನ್ ಆವರಣ ಗೋಡೆ ಸಮಸ್ಯೆ ಇತ್ಯರ್ಥಗೊಂಡಿದ್ದು, ನ.25ರಂದು ಮಧ್ಯಾಹ್ನ 12 ಗಂಟೆಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉಪಸ್ಥಿತರಿರುವರು ಎಂದು‌ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಪಂ‌ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮುಖಂಡರಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ ಜೈನ್, ಸವಿತಾ ರಮೇಶ್, ಮಲ್ಲಿಕಾ, ಜಯಂತಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News