ಅನಿರೀಕ್ಷಿತ ರಾಜಕೀಯ ಬೆಳವಣಿಗೆ: ಜಮ್ಮು ಕಾಶ್ಮೀರದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ?

Update: 2018-11-21 10:42 GMT

ಶ್ರೀನಗರ, ನ.21: ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸರಕಾರ ಸ್ಥಾಪಿಸಲು ಕಾಂಗ್ರೆಸ್ ಮತ್ತು ಸ್ಥಳೀಯ ಪಕ್ಷಗಳಾದ ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಒಮರ್ ಅಬ್ದುಲ್ಲಾ ಅವರ ನ್ಯಾಶನಲ್ ಕಾನ್ಫರೆನ್ಸ್ ಮಾತುಕತೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಝಾದ್ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸರಕಾರ ರಚನೆಗೆ ಒಗ್ಗೂಡಬೇಕು ಎಂದು ಕಾಂಗ್ರೆಸ್, ಪಿಡಿಪಿ ಮತ್ತು ಎನ್ ಸಿ ಪಕ್ಷಗಳು ಜೊತೆಯಾಗಿವೆ. ನಾವು ಮಾತುಕತೆ ನಡೆಸುತ್ತಿದ್ದೇವಷ್ಟೇ, ಬೇರೇನೂ ಅಲ್ಲ” ಎಂದು ಆಝಾದ್ ಹೇಳಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪಿಡಿಪಿಯಲ್ಲಿ 28, ಎನ್ ಸಿಯಲ್ಲಿ 15 ಮತ್ತು ಕಾಂಗ್ರೆಸ್ ನಲ್ಲಿ 12 ಶಾಸಕರಿದ್ದಾರೆ. ಬಹುಮತಕ್ಕೆ 44 ಶಾಸಕರ ಅಗತ್ಯವಿದೆ. ಸರಕಾರ ರಚನೆಯ ಬಗ್ಗೆ ಮಾತುಕತೆ ಫಲಪ್ರದವಾದರೆ ನಾಳೆ ಮೂರೂ ಪಕ್ಷಗಳ ನಾಯಕರು ರಾಜ್ಯಪಾಲ ಸತ್ಯಪಾಲ್ ಮಲಿಕ್ ರನ್ನು ನಾಳೆ ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News