×
Ad

ಮಂಡ್ಯ: ಸರಣಿ ರಸ್ತೆ ಅಪಘಾತಕ್ಕೆ ಬೈಕ್ ಸವಾರರಿಬ್ಬರು ಬಲಿ

Update: 2018-11-21 19:39 IST

ಮಂಡ್ಯ, ನ.21: ಬೈಕ್, ಕಾರ್ ಮತ್ತು ಟೆಂಪೋ ಟ್ರಾವೆಲ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸಿದ್ದಯ್ಯನ ಕೊಪ್ಪಲು ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.

ಮಾದೇಶ್ (45) ಹಾಗೂ ಜೇಮ್ಸ್ (30) ಸಾವನ್ನಪ್ಪಿದವರು ಎಂದು ಗುರುತಿಸಲಾಗಿದ್ದು, ಇವರು ಗಾರೆ ಕೆಲಸಕ್ಕೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ಹೆದ್ದಾರಿ ರಸ್ತೆ ಸಂಚಾರಕ್ಕೆ ತಡೆಯುಂಟಾಗಿತ್ತು.

ಸ್ಥಳಕ್ಕಾಗಮಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News