ಉಡುಪಿ: ರಾಜ್ಯಮಟ್ಟದ ರಂಗಭೂಮಿ ಕನ್ನಡ ನಾಟಕ ಸ್ಪರ್ಧೆ ಉದ್ಘಾಟನೆ

Update: 2018-11-21 15:19 GMT

ಉಡುಪಿ, ನ.21: ಉಡುಪಿ ರಂಗಭೂಮಿಯ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ಸಹಕಾರದೊಂದಿಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ದಿ.ಡಾ.ಟಿ.ಎಂ.ಎಪೈ, ದಿ.ಎಸ್.ಎಲ್.ನಾರಾಯಣ ಭಟ್ ಮತ್ತು ದಿ.ಮಲ್ಪೆ ಮಧ್ವರಾಜ್ ಸ್ಮಾರಕ 39ನೆ ರಾಜ್ಯಮಟ್ಟದ ಕನ್ನಡ ನಾಟಕ ಸ್ಪಧೆಗೆರ್ ಬುಧವಾರ ಚಾಲನೆ ನೀಡಲಾಯಿತು.

ಸ್ಪರ್ಧೆಯನ್ನು ಉದ್ಘಾಟಿಸಿದ ಎಂಜಿಎಂ ಕಾಲೇಜಿನ ಪ್ರಭಾರ ಪ್ರಾಂಶುಪಾಲ ದೇವಿದಾಸ್ ನಾಯಕ್ ಮಾತನಾಡಿ, ನಾಟಕವು ಮನಸ್ಸು ಮತ್ತು ಹೃದಯಕ್ಕೆ ಹತ್ತಿರವಾದುದು. ಇಲ್ಲಿ ಸ್ಪರ್ಧೆ ಮುಖ್ಯವೇ ಹೊರತು ಬಹುಮಾನವಲ್ಲ. ಸಂಘ ಟಕರ ಸ್ಪರ್ಧಾ ಉತ್ಸಾಹವನ್ನು ಕಲಾವಿದರು ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಸ್ಪರ್ಧೆಯ ತೀರ್ಪುಗಾರರಾದ ಪಾವರ್ತಿ ಜಿ.ಐತಾಳ್, ಉಪೇಂದ್ರ ಸೋಮಯಾಜಿ, ಲಕ್ಷ್ಮೀನಾರಾಯಣ, ತಪಸ್ವಿ ಎಚ್.ಎಂ., ವಿನ್ಯಾಸ್ ಹೆಗ್ಡೆ ಅವರನ್ನು ಗೌರವಿಸಲಾಯಿತು. ಅಧ್ಯಕ್ಷತೆಯನ್ನು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ವಹಿಸಿದ್ದರು.

ಗೌರವಾಧ್ಯಕ್ಷ ಡಾ.ಎಚ್.ಶಾಂತಾರಾಮ್ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಉಪಾಧ್ಯಕ್ಷ ಎಂ.ನಂದಕುಮಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯ ದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ವಂದಿಸಿದರು. ರವಿರಾಜ್ ಎಚ್.ಪಿ. ಕಾರ್ಯ ಕ್ರಮ ನಿರೂಪಿಸಿದರು. ಬಳಿಕ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ನಾಟಕ ಸಂಘದಿಂದ ಬಿರುಗಾಳಿ ನಾಟಕ ಪ್ರದರ್ಶನ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News