ಜಿಪಂ ಸದಸ್ಯರ ಮೇಲೆ ದೌರ್ಜನ್ಯ ಆರೋಪ: ಬೈಂದೂರು ಎಸ್ಸೈ ವಿರುದ್ಧ ಬಿಜೆಪಿ ಪ್ರತಿಭಟನೆ

Update: 2018-11-21 15:39 GMT

ಬೈಂದೂರು, ನ.21: ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಶಿರೂರು, ಜಿಪಂ ಸದಸ್ಯ ಸುರೇಶ್ ಬಟ್ವಾಡಿ ಅವರ ಮೇಲೆ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ಬೈಂದೂರು ಕ್ಷೇತ್ರ ಬಿಜೆಪಿ ವತಿಯಿಂದ ಬುಧವಾರ ಬೈಂದೂರು ಪೊಲೀಸ್ ಠಾಣೆ ಎದುರು ಧರಣಿ ನಡೆಸಲಾಯಿತು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಬೈಂದೂರು ಠಾಣಾಧಿಕಾರಿ ಜಿಪಂ ಸದಸ್ಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇವರನ್ನು ಕೂಡಲೇ ಇಲ್ಲಿಂದ ವರ್ಗಾವಣೆ ಮಾಡಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಕುಂದಾಪುರ ಡಿವೈಎಸ್‌ಪಿ ದಿನೇಶ್ ಕುಮಾರ್ ಧರಣಿ ನಿರತರನ್ನು ಸಮಾಧಾನ ಪಡಿಸಿ, ಈ ಪ್ರಕರಣದ ಕುರಿತು ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಸದಸ್ಯರಾದ ಸುರೇಶ್ ಬಟ್ವಾಡಿ, ಬಾಬು ಶೆಟ್ಟಿ, ತಾಪಂ ಸದಸ್ಯ ಪುಷ್ಪರಾಜ್ ಶೆಟ್ಟಿ, ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ದೀಪಕ್ ಕುಮಾರ್ ಶೆಟ್ಟಿ, ಬಾಲಚಂದ್ರ ಭಟ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News