ಸೆ.23ರಂದು ಸಕಾಲ, ಬಾಪೂಜಿ ಸೇವಾ ಕೇಂದ್ರದ ವೈಫಲ್ಯತೆ ವಿರೋಧಿಸಿ ಧರಣಿ

Update: 2018-11-21 15:41 GMT

ಉಡುಪಿ, ನ.21: ಸಕಾಲ ಹಾಗೂ ಬಾಪೂಜಿ ಸೇವಾ ಕೇಂದ್ರದ ವೈಫಲ್ಯತೆ ವಿರೋಧಿಸಿ ಜಿಲ್ಲಾ ಬಿಜೆಪಿ ಪಂಚಾಯತ್‌ರಾಜ್ ಪ್ರಕೋಷ್ಠದ ವತಿಯಿಂದ ಸೆ. 23ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10ಗಂಟೆಗೆ ಮಣಿಪಾಲದ ಉಪೇಂದ್ರ ಪೈ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಧರಣಿಯ ಬಳಿಕ ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಗುವುದು. ಇದರಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರು ಗಳು ಪಾಲ್ಗೊಳ್ಳಲಿರುವರು ಎಂದು ಪ್ರಕೋಷ್ಠದ ಸಂಚಾಲಕ ಸಾಣೂರು ನರ ಸಿಂಹ ಕಾಮತ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಹಿಂದಿನ ಸರಕಾರ ಆರಂಭಿಸಿರುವ ಬಾಪೂಜಿ ಸೇವಾಕೇಂದ್ರದಲ್ಲಿ ಸಿಗಬೇಕಾದ ಗ್ರಾಮೀಣಾಭಿವೃದ್ಧಿಯ 43 ಸೇವೆಗಳನ್ನು ಸಮ್ಮಿಶ್ರ ಸರಕಾರ 25ಕ್ಕೆ ಇಳಿಸಿದೆ. ಈ ಕೇಂದ್ರಗಳಿಗೆ ಮೂಲಭೂತ ಸೌರ್ಕಯಗಳನ್ನು ಒದಗಿಸದ ಪರಿಣಾಮ ಈ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸರಕಾರದ ಇಚ್ಛಾಶಕ್ತಿ ಕೊರತೆಯಿಂದ ಸಕಾಲ ಯೋಜನೆ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮುಖಂಡರಾದ ಕಟಪಾಡಿ ಶಂಕರ ಪೂಜಾರಿ, ವಿಜಯ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News