ಕೋಟೇಶ್ವರ: ವಿಶ್ವಕರ್ಮ ಒಕ್ಕೂಟದಿಂದ ಪ್ರತಿಭಾ ಪುರಸ್ಕಾರ

Update: 2018-11-21 15:47 GMT

ಕುಂದಾಪುರ, ನ.21: ದ.ಕ. ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ 2018 ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಕೋಟೇಶ್ವರದ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಜರಗಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಮೇಘನಾ ಆಚಾರ್ಯ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಯು.ಕೆ.ಎಸ್.ಸೀತಾರಾಮ ಆಚಾರ್ಯ ವಹಿಸಿದ್ದರು. 63 ವಿದ್ಯಾರ್ಥಿಗಳಿಗೆ ದತ್ತಿನಿಧಿ ಪ್ರತಿಭಾ ಪುರಸ್ಕಾರ ಹಾಗೂ 49 ಮಂದಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಕೋಟೇಶ್ವರ ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಆಚಾರ್ಯ ನೇರಂಬಳ್ಳಿ, ಸಾಗರ ವಿಶ್ವಕರ್ಮ ಸೇವಾ ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ವಕ್ವಾಡಿ, ಕೋಟೇಶ್ವರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ವಿಠಲ ಆಚಾರ್ಯ, ಕುಂದಾಪುರ ಮಂಜುನಾಥ ಆಸ್ಪತ್ರೆಯ ಡಾ.ಅಶೋಕ್, ಬಸ್ರೂರು ಪ್ರಾಥಮಿಕ ಅರೋಗ್ಯ ಕೇಂದ್ರದ ಡಾ.ವಿದ್ಯಾ ಅಶೋಕ್ ಮುಖ್ಯ ಅತಿಥಿಗಳಾಗಿ ದ್ದರು.

ಒಕ್ಕೂಟದ ಗೌರವ ಅಧ್ಯಕ್ಷ ಅಲೆವೂರು ಯೋಗೀಶ ಆಚಾರ್ಯ, ಉಪಾಧ್ಯಕ್ಷ ಮಧು ಆಚಾರ್ಯ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಾಲನಟಿ ಶ್ಲಾಘ ಅವರನ್ನು ಸನ್ಮಾನಿಸಲಾಯಿತು. ಕೋಶಾಧಿಕಾರಿ ಜನಾರ್ದನ ಆಚಾರ್ಯ, ಮಹಿಳಾ ಮಂಡಳಿಯ ಅಧ್ಯಕ್ಷೆ ವನಜಾಕ್ಷಿ ಸೀತಾರಾಮ ಆಚಾರ್ಯ, ಯುವಕ ದಳದ ಅಧ್ಯ ಸತೀಶ ಆಚಾರ್ಯ ಉಪಸ್ಥಿತರಿದ್ದರು.

ಬಿ.ಎ.ಆಚಾರ್ಯ ಮಣಿಪಾಲ ಸ್ವಾಗತಿಸಿದರು. ಭಾರತಿ ಗೇರುಕಟ್ಟೆ ವಂದಿಸಿ ದರು. ಪ್ರಧಾನ ಕಾರ್ಯದರ್ಶಿ ಕೆ.ಮುರಳೀಧರ್ ಕಾರ್ಯಕ್ರಮ ನಿರೂಪಿಸಿ ದರು. ಆರಂಭದಲ್ಲಿ ಸಮುದಾಯದ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸ ಲಾದ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News