ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಬೆಂಬಲ: ಸಂಜೀವ ಮಠಂದೂರ

Update: 2018-11-21 15:48 GMT

ಮಂಗಳೂರು, ನ.21: ಮಂಗಳೂರಿನಲ್ಲಿ ನ.25ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ನಡೆಯಲಿರುವ ಬೃಹತ್ ಜನಾಗ್ರಹ ಸಮಾವೇಶಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನ.25ರಂದು ಸಂಜೆ 4 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ಜನಾಗ್ರಹ ಸಭೆಯಲ್ಲಿ ಪ್ರತಿ ಬೂತ್‌ನಿಂದ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸುಮಾರು 1 ಲಕ್ಷದಷ್ಟು ಮಂದಿ ಸೇರುವ ನಿರೀಕ್ಷೆ ಇದೆ. ಪ್ರತಿ ಬೂತ್ ಹಾಗೂ ಗ್ರಾಮ ಮಟ್ಟದಲ್ಲಿ ಸಮಾವೇಶಕ್ಕೆ ತೆರಳುವ ಬಗ್ಗೆ ಸಿದ್ಧತೆ ನಡೆಸಲಾಗಿದೆ ಎಂದರು.

ಅಯೋಧ್ಯೆ ರಾಮನ ಜನ್ಮಸ್ಥಾನ ಎಂದು ಲಕ್ನೋ ಹೈಕೋರ್ಟ್ ತೀರ್ಪು ನೀಡಿದೆ. ಈಗ ಸುಪ್ರೀಂ ಕೋರ್ಟ್ ವಿಚಾರಣೆ ಹಂತದಲ್ಲಿದೆ. ನ್ಯಾಯಾಲಯ ತೀರ್ಪು ಮಂದಿರ ಪರವಾಗಿ ಬರಬಹುದು ಎಂಬ ನಂಬಿಕೆ ಇದೆ. ಮುಸ್ಲಿಂ ಸಂಘಟನೆಗಳು ಕೂಡ ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಅಯೋಧ್ಯೆಯಲ್ಲಿ ಶೇ.75ರಷ್ಟು ಕಾಮಗಾರಿ ಮುಗಿದಿದೆ ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸುದರ್ಶನ್, ಕಿಶೋರ್, ಜಿತೇಂದ್ರ ಕೊಟ್ಟಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News